ಬೆಂಗಳೂರು: ಕೆಲ ದಿನಗಳ ಹಿಂದೆ ಮಾಜಿ ಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ ( MD Lakshminarayana ), ಕಾಂಗ್ರೆಸ್ ಪಕ್ಷಕ್ಕೆ ( Congress Party ) ರಾಜೀನಾಮೆ ನೀಡಿ ಹೊರ ನಡೆದಿದ್ದರು. ಇದೀಗ ಅವರು ಸೆ.10ರಂದು ಅಧಿಕೃತವಾಗಿ ಬಿಜೆಪಿ ( BJP ) ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 10-09-2022ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ದಿನಾಂಕ 31-08-2022ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಅವರಿಗೆ ಪತ್ರಬರೆದಿದ್ದಂತ ಅವರು, ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು, ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ತಿಳಿಸಿದ್ದರು. ಈ ಬಳಿಕ ಇದೀಗ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ( BJP Janaspandana Program ) ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರೋದಾಗಿ ಘೋಷಣೆ ಮಾಡಿದ್ದಾರೆ.
BIGG NEWS : ಉದ್ಯೋಗಿಗಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್ ; ಶೀಘ್ರ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ |DA Hike Date