ಮುಂಬೈ: ಷೇರು ಮಾರುಕಟ್ಟೆ ವಂಚನೆ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸೆಬಿಯ ಮಾಜಿ ಮುಖ್ಯಸ್ಥ ಮಾಧಾಬಿ ಪುರಿ ಬುಚ್ ಮತ್ತು ಇತರ ಐವರು ಸೋಮವಾರ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ
ಬಾಂಬೆ ಹೈಕೋರ್ಟ್ ಮಾರ್ಚ್ 4 ರಂದು ಅರ್ಜಿಗಳ ವಿಚಾರಣೆ ನಡೆಸಲಿದೆ ಮತ್ತು ಅಲ್ಲಿಯವರೆಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಕಾರ್ಯನಿರ್ವಹಿಸುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ