ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 27 ರಂದು ನಡೆಸಲಿರುವ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಈ ಕೆಳಗಿನ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
ಒಟ್ಟು ಎರಡು ಪತ್ರಿಕೆಗಳ ಪರೀಕ್ಷೆಗಳು ಆಗಸ್ಟ್ 27ರ ಮಂಗಳವಾರ ನಡೆಯಲಿದೆ. ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1 ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು.
ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.
ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.
ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ.