ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ವಿಚಾರಣೆಗೆ ಕರೆದಿದೆ ಎಂದು ಪಿಟಿಐ ವರದಿ ಮಾಡಿದೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಾರಿಗೆ ಸಚಿವ ಮತ್ತು ಎಎಪಿ ಮುಖಂಡ ಕೈಲಾಶ್ ಗೆಹ್ಲೋಟ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಭಾನುವಾರ ಸಮನ್ಸ್ ನೀಡಿದೆ. ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ತನಿಖಾ ಸಂಸ್ಥೆ ಬಂಧಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ನಜಾಫ್ಗಢದ ಶಾಸಕರಾಗಿರುವ ಗೆಹ್ಲೋಟ್, ಈಗ ರದ್ದುಪಡಿಸಲಾದ ದೆಹಲಿ ಸರ್ಕಾರದ 2021-22ರ ಮದ್ಯ ನೀತಿಯ ಕರಡನ್ನು ಸಿದ್ಧಪಡಿಸಿದ ಸಮಿತಿಯ ಭಾಗವಾಗಿದ್ದರು. ಜಾರಿ ನಿರ್ದೇಶನಾಲಯದ ಪ್ರಕಾರ, ಕರಡು ಅಬಕಾರಿ ನೀತಿಯನ್ನು ‘ಸೌತ್ ಗ್ರೂಪ್’ ಗೆ ಸೋರಿಕೆ ಮಾಡಲಾಗಿದೆ ಎನ್ನಲಾಗಿದೆ.