ಉದಯಪುರ : ಉದಯಪುರ-ಅಹಮದಾಬಾದ್ ರೈಲ್ವೆ ಹಳಿಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಅಹಮದಾಬಾದ್ನಿಂದ ಇತ್ತೀಚೆಗೆ ಉದ್ಘಾಟನೆಗೊಂಡ ಅಸರ್ವಾ-ಉದೈಪುರ ಎಕ್ಸ್ಪ್ರೆಸ್ ರೈಲು ಹಾದುಹೋಗುವ ಕೆಲವೇ ಗಂಟೆಗಳ ಮೊದಲು ಸ್ಫೋಟ ಸಂಭವಿಸಿತ್ತು.ಕೃತ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BREAKING NEWS: 200 ಒಕ್ಕಲಿಗ ಹುಡುಗಿಯರಿಗೆ 10 ಸಾವಿರಕ್ಕೂ ಅರ್ಜಿ ಸಲ್ಲಿಕೆ; ಮಂಡ್ಯದ ಆದಿಚುಂಚನಗಿರಿಯಲ್ಲಿ ಜನಜಾತ್ರೆ
ಘಟನೆಯ ನಂತರ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಾಗುತ್ತಿದೆ.
ಉದಪುರದಿಂದ ಸುಮಾರು 35 ಕಿಮೀ ದೂರದ ಹಳಿಯಲ್ಲಿ ಸ್ಫೋಟ ಸಂಭವಿಸಿದೆ, ಎಟಿಎಸ್, ಎನ್ಐಎ ಮತ್ತು ಆರ್ಪಿಎಫ್ ತಂಡಗಳು ಸ್ಥಳದಲ್ಲಿವೆ. ತನಿಖೆ ನಡೆಯುತ್ತಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಸೇತುವೆಯನ್ನು ಪುನಃಸ್ಥಾಪಿಸಲು ತಂಡವು ಈಗಾಗಲೇ ಸ್ಥಳದಲ್ಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯು ಆತಂಕಕಾರಿಯಾಗಿದೆ. ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಅವರಿಗೆ ಆದೇಶಿಸಿದ್ದಾರೆ ಎನ್ನಲಾಗುತ್ತಿದೆ.
ಘಟನೆಯ ತನಿಖೆಗೆ ಕೇಂದ್ರೀಯ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ ಮತ್ತು ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ರೈಲ್ವೆ ಅಧಿಕಾರಿಗಳ ಸಮನ್ವಯದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಜಿಪಿ ಮಿಶ್ರಾ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ಭಯೋತ್ಪಾದನಾ ನಿಗ್ರಹ ದಳದ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ.
ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ಸಿದ್ದ ಎಂದಿದ್ದ ಬಿಜೆಪಿ ಮುಖಂಡ ಅರೆಸ್ಟ್