ಜಮ್ಮು&ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಅಪ್ಪರ್ ಡ್ಯಾಂಗ್ರಿ ಗ್ರಾಮದಲ್ಲಿ ಶಂಕಿತ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿಮಗುವೊಂದು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ವಿವರಗಳ ಪ್ರಕಾರ, ಭಾನುವಾರದಂದು ಭಯೋತ್ಪಾದಕರ ಗುಂಡಿಗೆ ಬಲಿಯಾದ ನಾಗರಿಕರ ಮನೆಯ ಸಮೀಪದಿಂದ ಡ್ಯಾಂಗ್ರಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಇದರ ಜೊತೆಗೆ ಶಂಕಿತ ಐಇಡಿ ಪತ್ತೆಯಾಗಿದೆ ಎಂದು ಭದ್ರತಾ ಪಡೆ ತಿಳಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ನಿನ್ನೆ, ಶಂಕಿತ ಭಯೋತ್ಪಾದಕರು ನಿರ್ದಿಷ್ಟ ಸಮುದಾಯದ ಮೂರು ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
J&K | Two people injured in a suspected explosion in Rajouri's Upper Dangri village; rushed to hospital. Further details awaited.
Yesterday, four civilians were killed by terrorists in the same village. pic.twitter.com/GsZH0g59yO
— ANI (@ANI) January 2, 2023
ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ, ಇಬ್ಬರು ಶಂಕಿತ ಭಯೋತ್ಪಾದಕರು ಗ್ರಾಮದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಕಾಣಿಸಿಕೊಂಡಿದ್ದರು. ಮೂರು ಮನೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BIGG NEWS : ಇಂದು ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah
BREAKING NEWS : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯವಾಗಿದ್ದಾರೆ : ವೈದ್ಯ ಎಸ್.ಬಿ.ಪಾಟೀಲ್ ಮಾಹಿತಿ