ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಇರಾಕ್ ರಾಜಧಾನಿ ಬಾಗ್ದಾದ್ನಲ್ಲಿ ಮಂಗಳವಾರ ಮುಂಜಾನೆ ಸ್ಫೋಟಗಳು ಕೇಳಿ ಬಂದವು.
ಬಾಗ್ದಾದ್ನ ಉತ್ತರಕ್ಕಿರುವ ಮಿಲಿಟರಿ ನೆಲೆಯಾದ ಕ್ಯಾಂಪ್ ತಾಜಿಯನ್ನು ಗುರಿಯಾಗಿಸಿಕೊಂಡು ಅಪರಿಚಿತ ಡ್ರೋನ್ ದಾಳಿ ನಡೆಸಿದೆ ಎಂದು ಇರಾಕ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಿಲಿಟರಿ ನೆಲೆಯ ರಾಡಾರ್ ವ್ಯವಸ್ಥೆಗೆ ಡ್ರೋನ್ ಡಿಕ್ಕಿ ಹೊಡೆದಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ಎಎಫ್ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹರಿದಾಡುತ್ತಿರುವ ವೀಡಿಯೊಗಳು ಮಿಲಿಟರಿ ನೆಲೆಗೆ ಬೆಂಕಿ ಹಚ್ಚಿರುವುದನ್ನು ತೋರಿಸುತ್ತವೆ