ಬೆಂಗಳೂರು: ನಗರದ ಜನರು ಬೆಚ್ಚಿ ಬೀಳುವಂತೆ ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆಯಾಗಿದೆ. ಈ ಮೂಲಕ ಜನರನ್ನು ಆತಂಕಕಕ್ಕೆ ದೂಡಿದೆ.
ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವಂತ ಖಾಸಗಿ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದಾವೆ. ಸ್ಥಳಕ್ಕೆ ಪೊಲೀಸರು, ಶ್ವಾನನದಳ, ಬಾಂಬ್ ನಿಷ್ಕ್ರೀಯ ದಳ ದೌಡಾಯಿಸಿ, ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾದಂತ ಸ್ಪೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದಂತ ಒಂದು ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಮಾಹಿತಿ ಇದೆ. ಸ್ಪೋಟಕ ವಸ್ತು ಪತ್ತೆಯಾದ ಹಿನ್ನಲೆಯಲ್ಲಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಮೂಲೆ ಮೂಲೆಯಲ್ಲೂ ತಪಾಸಣೆಯನ್ನು ಪೊಲೀಸರು ಮಾಡುತ್ತಿದ್ದಾರೆ.
ಸದ್ಯ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಸ್ಪೋಟ ವಸ್ತುಗಳನ್ನು ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಇರಿಸಿ ತೆರಳಿದವರು ಯಾರು ಎನ್ನುವ ಬಗ್ಗೆ ತನಿಖೆಯ ನಂತ್ರ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ಒಂದೇ ಒಂದು ದಿನದ ಮಟ್ಟಿಗೆ ‘ಪೌರಾಯುಕ್ತ’ರನ್ನು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
BREAKING : ಕರ್ನಾಟಕದಲ್ಲಿ ಸೆ.22 ರಿಂದ ಅ.7ರವರೆಗೆ ‘ಮರು ಜಾತಿಗಣತಿ’ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ