ರಾಮನಗರ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ರಾಜಕೀಯ ಕಸರತ್ತುಗಳು ಆರಂಭವಾಗಿದೆ.
ಬಿಜೆಪಿ ಸೇರ್ಪಡೆ ಕುರಿತು ಸಂಸದೆ ಸುಮಲತಾ ಜೊತೆ ಪಕ್ಷದ ವರಿಷ್ಠರು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುಮಲತಾ ಮಾನಸಿಕವಾಗಿ ಬಿಜೆಪಿ ಜೊತೆಗೆ ಇದ್ದಾರೆ ಅನ್ನಿಸುತ್ತಿದೆ, ಹಳೇ ಮೈಸೂರು ಭಾಗದ ಹಲವು ಮುಖಂಡರು ಬಿಜೆಪಿ ಸೇರ್ತಾರೆ ಎಂದು ಹೇಳಿದರು.
ಆಪರೇಷನ್ ಕಮಲದ ಕುರಿತು ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.ಎರಡೂ ಪಕ್ಷದದಿಂದ ಮುಖಂಡರು ಬರಲಿದ್ದಾರೆ, ನಾವು ಹೇಳೋದಕ್ಕಿಂತ ಮಾಡಿ ತೋರಿಸುತ್ತೀವಿ, ಕಾದು ನೋಡಿ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.
ನನ್ನ ಆದ್ಯತೆ ರೈತರಿಗೆ ಪರಿಹಾರ ನೀಡುವುದೇ ಹೊರತು ಗುತ್ತಿಗೆದಾರರಿಗೆ ಹಣ ಕೊಡುವುದು ಅಲ್ಲ: ಸಚಿವ ಗೋವಿಂದ ಕಾರಜೋಳ
BIGG NEWS : ‘ಚಾರ್ ಧಾಮ್’ ಯಾತ್ರೆಯ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಜ.31ವರೆಗೆ ವಿಸ್ತರಣೆ