ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಬಾಕಿ ಮೊತ್ತ ಪಾವತಿಯ ಶೇ. 50 ವಿನಾಯಿತಿಯ ಕಾಲಮಿತಿಯನ್ನು ಮೂರು ತಿಂಗಳು ವಿಸ್ತರಿಸಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದ ಜಗದೀಶ್ ವಿ ಸದಂ, “ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಶಿಫಾರಸಿನಂತೆ, ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ದಂಡವನ್ನು ಫೆಬ್ರವರಿ 11ರೊಳಗೆ ಪಾವತಿಸಿದಲ್ಲಿ ಶೇ. 50% ವಿನಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗೆ ವಿನಾಯಿತಿ ನೀಡುವ ಮೂಲಕ ವಾಹನಸವಾರರಿಗೆ ನೆರವಾಗುವುದು ಸ್ವಾಗತಾರ್ಹ. ಆದರೆ ಅತ್ಯಲ್ಪ ಅವಧಿಯ ಕಾಲಮಿತಿ ನಿಗದಿಪಡಿಸುವ ಮೂಲ ಕೇವಲ ಶ್ರೀಮಂತ ವಾಹನ ಸವಾರರಿಗೆ ಮಾತ್ರ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ” ಎಂದು ಹೇಳಿದರು.
“ಕೇವಲ ಒಂದು ವಾರಗಳ ಸಮಯಾವಕಾಶ ನೀಡುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಾಹನ ಸವಾರರಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ. ಅಲ್ಲದೇ, ಅನೇಕ ವಾಹನ ಸವಾರರು ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸುವುದು ಸೇರಿದಂತೆ ನಾನಾ ರೀತಿಯ ಅಗತ್ಯ ಖರ್ಚುಗಳು ಈ ಸಮಯದಲ್ಲಿರುತ್ತದೆ. ವಿನಾಯಿತಿಯನ್ನು ಯೋಜನೆಯನ್ನು ದಿಢೀರ್ ಘೋಷಿಸಿರುವುದರಿಂದ ಮೊದಲೇ ಹಣವನ್ನು ಕೂಡಿಟ್ಟುಕೊಳ್ಳಲೂ ವಾಹನ ಸವಾರರಿಗೆ ಅವಕಾಶ ಸಿಕ್ಕಿರುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಯವರು ಈ ವಿನಾಯಿತಿ ಯೋಜನೆಯ ಕಾಲಮಿತಿಯನ್ನು ಮೂರು ತಿಂಗಳ ತನಕ ವಿಸ್ತರಿಸಬೇಕು. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರರಿಗೂ ವಿನಾಯಿತಿಯ ಫಲಾನುಭವ ಸಿಗುವಂತೆ ಮಾಡಬೇಕು” ಎಂದು ಜಗದೀಶ್ ವಿ ಸದಂ ಆಗ್ರಹಿಸಿದರು.
’13 ಜನರನ್ನ ಮಂಚದ ಮೇಲೆ ಮಲಗಿಸಿ ಅಧಿಕಾರಕ್ಕೆ ಬಂದ ಬಿಜೆಪಿಗೆ ನಾಚಿಕೆ ಆಗ್ಬೇಕು’ : ಸಿ.ಎಂ ಇಬ್ರಾಹಿಂ ವಾಗ್ಧಾಳಿ
BREAKING NEWS : ರಾಮನಗರದಲ್ಲಿ ಘೋರ ಘಟನೆ : ‘ಸೆಲ್ಫಿ’ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ