ಬೆಂಗಳೂರು: ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ರಾಜ್ಯದ ಅನುದಾನಿತ ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳೂ ವಿಸ್ತರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸರ್ಕಾರಿ ನೌಕರರು, ಅವರ ಅವಲಂಬಿತರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆಯನ್ನು ಜಾರಿಗೊಳಿಸಿರೋದಕ್ಕೆ ನೌಕರರ ಸಂಘದ ಪರವಾಗಿ ಧನ್ಯವಾದವನ್ನು ಸಲ್ಲಿಸಿದ್ದಾರೆ.
ರಾಜ್ಯಾಧ್ಯಂತ ಇರುವಂತ ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರು, ಲಿಪಿಕ ವೃಂದದ ಸಿಬ್ಬಂದಿಗಳು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವಂತೆ ತಮ್ಮಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರು ಮನವಿ ಮಾಡಿಕೊಂಡಿರೋದಾಗಿ ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆಯನ್ನು ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೂ ವಿಸ್ತರಿಸೋದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

BREAKING: ನಾಳೆಯೊಳಗೆ ಪ್ರಯಾಣಿಕರ ಹಣ ಮರುಪಾವತಿಗೆ ‘ಇಂಡಿಗೋ ವಿಮಾನ ಸಂಸ್ಥೆ’ಗೆ ಕೇಂದ್ರ ಸರ್ಕಾರ ನಿರ್ದೇಶನ
BREAKING : ಕೆಲಸದ ನಂತರ ಕರೆ-ಇಮೇಲ್ ಗೆ ಉತ್ತರಿಸುವ ಅಗತ್ಯವಿಲ್ಲ : ಸಂಸತ್ತಿನಲ್ಲಿ ಮಂಡನೆಯಾಯ್ತು ಹೊಸ ಮಸೂದೆ!







