ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಬಹಳ ಜನ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದುದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎಂದು ಕೆಯುಡಬ್ಲೂೃಜೆ ಆಗ್ರಹಿಸಿದೆ.
ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದಿಸುವುದಾಗಿ ತಿಳಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಯೋಜನೆ ಎಲ್ಲಾ ಪತ್ರಕರ್ತರಿಗೂ ಸಿಗುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ.
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದು ಅಷ್ಟೇ ಅಲ್ಲ, ಬಜೆಟ್‌ನಲ್ಲಿಯೂ ಪ್ರಕಟಿಸಿ ನುಡಿದಂತೆ ನಡೆದಿದ್ದರು. ಈ ನಿಟ್ಟಿನಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪಾತ್ರವೂ ಪ್ರಾಮುಖ್ಯವಾಗಿತ್ತು ಎನ್ನುವುದನ್ನು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ಮರಿಸಿದ್ದಾರೆ.
ರಾಜ್ಯದಲ್ಲಿ ಶುಶ್ರೂಷಕರ ನೋಂದಣಿಗಾಗಿ ವಿಶೇಷ ಡಿಜಿ ಲಾಕರ್ ತಂತ್ರಜ್ಞಾನ: ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ
BREAKING: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶ