ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯು 2025-26ನೇ ಸಾಲಿನಲ್ಲಿ ಕರ್ನಾಟಕ ಡಿ.ಎಸ್.ಟಿ.-ಪಿಹೆಚ್.ಡಿ. ಶಿಷ್ಯವೇತನ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) “ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ.-ಪಿಹೆಚ್.ಡಿ. ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುμÁ್ಠನಗೊಳಿಸುತ್ತಿದೆ.
ಆನ್‍ಲೈನ್ ಮೂಲಕ ಅರ್ಜಿಗಳನ್ನು 2025ರ ಡಿಸೆಂಬರ್ 20, ಸಂಜೆ 5.30 ಗಂಟೆ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸಲು ಜಾಲತಾಣ ಲಿಂಕ್ http://ksteps.karnataka.gov.in ಮೂಲಕ ಭೇಟಿ ನೀಡಬಹುದಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Extension of application period for Karnataka DST-PhD scholarship








