ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.
ಆಸಕ್ತರು ಏಪ್ರಿಲ್ 30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.