ಬೆಂಗಳೂರು: ಎರಡನೇ ವರ್ಷ ಅಥವಾ ಮೂರನೇ ಸೆಮಿಸ್ಟರ್ ನ ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಡಿಸಿಇಟಿ-25 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಲು ಜು.22ರವರಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಜು.22ರಂದು ಬೆಳಿಗ್ಗೆ 11 ಗಂಟೆವರೆಗೆ ಛಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಶುಲ್ಕ ಪಾವತಿಗೆ, ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಛಾಯ್ಸ್ 1 ಮತ್ತು 2 ಆಯ್ಕೆ ಮಾಡಿಕೊಂಡವರು ಮಾತ್ರ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಛಾಯ್ಸ್ -1 ದಾಖಲಿಸಿದವರು ಮಂಗಳವಾರವೇ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿ.ಕೆ.ಶಿವಕುಮಾರ್
ಅನಾರೋಗ್ಯದ ಮಧ್ಯೆಯೂ ಜನರ ಅಹವಾಲು ಸ್ವೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್