ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್.30ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಇದು ಅಂತಿಮ ವಿಸ್ತರಣೆ ಅಂತ ತಿಳಿಸಿದೆ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.
ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್‌ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ.
ಅಲ್ಲದೆ, ಆನ್‌ಲೈನ್ https://schedulecastesurvey.karnataka.gov.in/selfdeclaration/ ಲಿಂಕ್ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.
ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ… pic.twitter.com/UrNW0SoKdG
— DIPR Karnataka (@KarnatakaVarthe) June 23, 2025
ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?: HDK ಪ್ರಶ್ನೆ
ನೀವು ‘ಮಲೆನಾಡಿನ ದೃಶ್ಯ ವೈಭವ’ವನ್ನು ಕಣ್ ತುಂಬಿಕೊಳ್ಳಬೇಕೇ? ತಪ್ಪದೇ ಈ ವೀಡಿಯೋ ಸಾಂಗ್ ನೋಡಿ | Malnad Yana