ಬೆಂಗಳೂರು: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನೂ ಜಾತಿಗಣತಿಯ ಕಾರ್ಯದಿಂದ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು.
ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ ಸಮೀಕ್ಷೆಯಿಂದ ಬಿಡುಗಡೆ ಮಾಡಲಾಗಿದೆ.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ: ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು
ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ