ಬೆಂಗಳೂರು: 2024 ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಕೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಕೃಷಿ ಮಾರಾಟ ಮಂಡಳಿ ವತಿಯಿಂದ ತುಮಕೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವತಿಯಿಂದ ಹಾಸನ, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ನೋಂದಣಿ ಮಾಡಿದ ರೈತರು ಜೂನ್ 14 ರಂದು ಖರೀದಿ ಪ್ರಕ್ರಿಯೆ ಅಂತ್ಯಗೊಳ್ಳುವುದರಿಂದ, ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರು ಉಂಡೆ ಕೊಬ್ಬರಿಯನ್ನು ಮಾರಾಟ ಮಾಡದೇ ಇದ್ದಲ್ಲಿ ಜೂನ್ 14 ರೊಳಗಾಗಿ ಸಂಬಂಧಪಟ್ಟ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ, ಯೋಜನೆಯ ಸದುಪಯೋಗ ಪಡೆದುಕೊಳ್ಳವಂತೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.