ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಹಾಗೂ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್(ಕೆಸಿಆರ್) ಅವರು ದಸರಾ ದಿನದಂದು ತಮ್ಮ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ. ಸೆಪ್ಟೆಂಬರ್ 5 ರಂದು(ನಾಳೆ) ಮಧ್ಯಾಹ್ನ 1:19 ಕ್ಕೆ ಇದಕ್ಕೆ ಮುಹೂರ್ತವನ್ನು ನಿಗದಿಪಡಿಸಲಾಗಿದೆ.

ಭಾನುವಾ ಕೆಸಿಆರ್ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಪಕ್ಷದ ಎಲ್ಲಾ 33 ಜಿಲ್ಲಾಧ್ಯಕ್ಷರೊಂದಿಗೆ ಉಪಾಹಾರ ಕೂಟವನ್ನು ನಡೆಸಿದರು. ಈ ವೇಳೆ ಕೆಸಿಆರ್ ರಾಷ್ಟ್ರೀಯ ಪಕ್ಷ ಆರಂಭಿಸುವ ಮಾರ್ಗಸೂಚಿ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.

ಟಿಆರ್‌ಎಸ್ ಶಾಸಕಾಂಗ ಪಕ್ಷ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ವಿಸ್ತೃತ ಸಭೆ ಬುಧವಾರ ತೆಲಂಗಾಣ ಭವನದಲ್ಲಿ ನಡೆಯುವ ನಿರೀಕ್ಷೆಯಿದೆ. ಇದರಲ್ಲಿ ಟಿಆರ್‌ಎಸ್ ರಾಷ್ಟ್ರೀಯ ಪಕ್ಷವಾಗುವ ಬಗ್ಗೆ ನಿರ್ಣಯವನ್ನು ಮಂಡಿಸಲಾಗುವುದು. ಇದನ್ನು ಭಾರತೀಯ ರಾಷ್ಟ್ರ ಸಮಿತಿ ಅಥವಾ BRS ಎಂದು ಕರೆಯುವ ಸಾಧ್ಯತೆಯಿದೆ.

ಸಂಸತ್ತಿನ ಮತ್ತು ವಿಧಾನಸಭೆಯ ಚುನಾಯಿತ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು, ಜಿಲ್ಲಾ ಪರಿಷತ್ತಿನ ಅಧ್ಯಕ್ಷರು, ಮೇಯರ್‌ಗಳು ಮತ್ತು ಪುರಸಭೆಯ ಅಧ್ಯಕ್ಷರು ಸೇರಿ 283 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಟಿಆರ್‌ಎಸ್‌ಗೆ ಮರುನಾಮಕರಣ ಮಾಡುವ ನಿರ್ಣಯವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗುವುದು. ರಾಜ್ಯ ಮಾನ್ಯತೆ ಪಡೆದ ಪಕ್ಷವಾಗಿ ಟಿಆರ್‌ಎಸ್ ಯಾವುದೇ ರಾಜ್ಯದಲ್ಲಿ ಸ್ಪರ್ಧಿಸಬಹುದು. ಮುಂಬರುವ 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಅದರ ಕಾರ್ಯಕ್ಷಮತೆಯ ಆಧಾರದ ಮೇಲೆ, ಟಿಆರ್‌ಎಸ್ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಬಹುದು. ಅದಕ್ಕೂ ಮುನ್ನ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಶೇ.6ರಷ್ಟು ಮತಗಳನ್ನು ಪಡೆಯುವ ಮೂಲಕ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಬಹುದು.

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಬಿಆರ್‌ಎಸ್ ಹೊರಹೊಮ್ಮಲಿದೆ ಮತ್ತು 2024ರಲ್ಲಿ ಇಬ್ಬರ ನಡುವೆ ನೇರ ಹೋರಾಟ ನಡೆಯಲಿದೆ ಎಂದು ಕೆಸಿಆರ್ ಪಕ್ಷದ ಹಿರಿಯ ನಾಯಕರಿಗೆ ತಿಳಿಸಿದ್ದಾರೆ.

ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿಯ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷ ಸ್ಪರ್ಧಿಸುವ ಸಾಧ್ಯತೆಯಿದೆ.

BIG NEWS : T20 ಇತಿಹಾಸದಲ್ಲಿ 11,000 ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ʻವಿರಾಟ್ ಕೊಹ್ಲಿʼ ಪಾತ್ರ | Virat Kohli

BIGG NEWS : ಅಡಿಕೆಗೆ `ಎಲೆಚುಕ್ಕೆ’ ರೋಗ : ಔಷಧ ಸಿಂಪಡಣೆಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ.ಆರ್ಥಿಕ ನೆರವು

BIGG BREAKING NEWS : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತ : ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ

Share.
Exit mobile version