ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಯೊಂದನ್ನು ತರಲಾಗುತ್ತಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಿಂದಲೇ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದಕ್ಕಾಗಿ ‘ನಿರಂತರ’ ಎಂಬ ವಿಶೇಷ ಯೋಜನೆಯನ್ನು ಸರ್ಕಾರ ಹಂತ ಹಂತವಾಗಿ ಜಾರಿಗೆ ತರುತ್ತಿದೆ.
ಇನ್ಮುಂದೆ ಪಿಯುಸಿ ಕಾಲೇಜುಗಳ ತರಗತಿಗಳಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳ ಹೆಸರು ಕರೆದು (ರೋಲ್ ಕಾಲ್) ಅಟೆಂಡೆನ್ಸ್ ಹಾಕುವ ಸಾಂಪ್ರದಾಯಿಕ ಪದ್ಧತಿಗೆ ಬ್ರೇಕ್ ಬೀಳಲಿದೆ. ಅದರ ಬದಲಾಗಿ, ಅತ್ಯಾಧುನಿಕ ಮುಖಚರ್ಯೆ ಗುರುತಿಸುವ (Facial Recognition) ಡಿಜಿಟಲ್ ವ್ಯವಸ್ಥೆಯ ಮೂಲಕ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲಾಗುತ್ತದೆ.
ವಿಶೇಷ ಸೂಚನೆ: ಮೊದಲ ಹಂತದಲ್ಲಿ ಈ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಕೇವಲ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇದನ್ನು ರಾಜ್ಯದ ಎಲ್ಲಾ ಅನುದಾನಿತ ಕಾಲೇಜುಗಳಿಗೂ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.








