ಚಾಮರಾಜನಗರ: ಪ್ರಸಿದ್ಧ ದೇವಾಲಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ಹೆಸರಿನ ಫೇಸ್ ಬುಕ್ ಪೇಜ್ ಹಾಕ್ಯ ಆಗಿರುವುದು ಬೆಳಕಿಗೆ ಬಂದಿದೆ.
ಇದರಲ್ಲಿ ಅಶ್ಲೀಲ ವಿಡಿಯೋಗಳು ಅಪ್ಲೋಡ್ ಆಗುತ್ತಿದ್ದು, ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.
2013ರಲ್ಲಿ ಕೊಳ್ಳಗಾಲ ಮೂಲದ ಸಂಜಯ್ ಕುಮಾರ್ ಎಂಬವರು ಫೇಸ್ ಬುಕ್ ನಲ್ಲಿ ಶ್ರೀಮಲೆ ಮಹದೇಶ್ವರ ಸ್ವಾಮಿ ಎಂಬ ಹೆಸರು ಕ್ರಿಯೆಟ್ ಮಾಡಿದ್ದರು.
ಇದರಲ್ಲಿ ಸುಮಾರು 17 ಸಾವಿರ ಅನುಯಾಯಿಗಳು ಹೊಂದಿದ್ದಾರೆ. ಈ ಪೇಜ್ ಮೂಲಕ ದೇವರ ಫೋಟೋಗಳು, ಪೂಜಾ ಕೈಂಕರ್ಯಗಳು ಸೇರಿದಂತೆ ಇತರ ಮಾಹಿತಿಗಳನ್ನು ಅಪ್ ಲೋಡ್ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ತಿಂಗಳಿಂದ ಈ ಪೇಜ್ ಅನ್ನು ಹ್ಯಾಕ್ ಮಾಡಲಾಗಿದೆ.ಸ್ಟೋರಿಗಳ ವಿಭಾಗದಲ್ಲಿ ಹುಡುಗಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಲಾಗುತ್ತಿದೆ. ಇದರ ಬಗ್ಗೆ ತಿಳಿದ ಸಂಜಯ್ ಕುಮಾರ್ ಕೂಡಲೇ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. 30 ಜನರಿಂದ ಈ ಪೇಜ್ ವಿರುದ್ಧ ರಿಪೋರ್ಟ್ ಮಾಡಿಸುವಂತೆ ಪೊಲೀಸರು ಸಂಜಯ್ಗೆ ಸಲಹೆ ನೀಡಿದ್ದಾರೆ.
ಈವರೆಗೆ 5 ಜನರಿಂದ ಸಂಜಯ್ ರಿಪೋರ್ಟ್ ಮಾಡಿಸಿದ್ದಾರೆ. ಹಾಗಾಗಿ ಹ್ಯಾಕ್ ಆಗಿರುವ ಪೇಜ್ ಅನ್ನು ಡೀ ಆ್ಯಕ್ಟಿವ್ ಮಾಡಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.