ಬೆಂಗಳೂರು: ಭಾರತವು ಎರಡನೇ ಹಂತದ ಮತದಾನವನ್ನು ಪೂರ್ಣಗೊಳಿಸುತ್ತಿದ್ದಂತೆ, ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬನನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಆ ವ್ಯಕ್ತಿಯು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (ಇವಿಎಂ) ನೆಲದ ಮೇಲೆ ಎಸೆಯುವುದನ್ನು ಕಾಣಬಹುದು, ನಂತರ ಅವನನ್ನು ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಆತನನ್ನು ಹಿಡಿದುಕೊಳ್ಳುವುದನ್ನು ಕೂಡ ನಾವು ಕಾಣಬಹುದಾಗಿದೆ. 

ಇದು ನಿಜವೇ?: 2023 ರ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇವಿಎಂ ಯಂತ್ರವನ್ನು ಹಾನಿಗೊಳಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ವೀಡಿಯೊ ಇತ್ತೀಚಿನದಲ್ಲ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹೂಟಗಳ್ಳಿಯ ಮತಗಟ್ಟೆಯಲ್ಲಿ ಬ್ಯಾಲೆಟ್ ಕಂಟ್ರೋಲ್ ಯೂನಿಟ್ ಅನ್ನು ಧ್ವಂಸಗೊಳಿಸಿದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಏತನ್ಮಧ್ಯೆ, ವ್ಯಕ್ತಿಯನ್ನು ವಶಕ್ಕೆ ಪಡೆದ ವಿಜಯನಗರ ಪೊಲೀಸರು, ಅವನು ಮಾನಸಿಕವಾಗಿ ಅಸ್ಥಿರನಾಗಿದ್ದಾನೆ ಎಂದು ಹೇಳಿ ತನಿಖೆಯ ನಂತರ ಬಿಡುಗಡೆ ಮಾಡಿದರು.

Share.
Exit mobile version