Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

BREAKING : ಅಲ್ಕಾ ಲಾಂಬಾಗೆ ಬಿಗ್ ಶಾಕ್ : ಪ್ರತಿಭಟನೆ ವೇಳೆ ಹಲ್ಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ: ನಾನು 140 ಶಾಸಕರ ಅಧ್ಯಕ್ಷ- ಡಿ.ಕೆ ಶಿವಕುಮಾರ್
KARNATAKA

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ: ನಾನು 140 ಶಾಸಕರ ಅಧ್ಯಕ್ಷ- ಡಿ.ಕೆ ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ಕೆಲವು ಶಾಸಕರು, ಮಂತ್ರಿಗಳು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಮತ್ತೊಂದೆಡೆ ಡಿನ್ನರ್ ಮೀಟಿಂಗ್ ನಡೆಯುತ್ತಿದೆ ಎಂದು ಕೇಳಿದಾಗ, “ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಸಿಎಂಗೆ ಆಲ್ ದಿ ಬೆಸ್ಟ್

“ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ”) ಎಂದರು.

ಯಾರೇ ಆದರೂ ಆಡಿದ ಮಾತು ಮುಖ್ಯ ಅಲ್ಲವೇ ಎಂದು ಕೇಳಿದಾಗ, “ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.

ಎರಡೂವರೆ ವರ್ಷಗಳಿಂದ ಡಿನ್ನರ್ ಮೀಟಿಂಗ್ ಆಗುತ್ತಲೇ ಇವೆ

ಸತೀಶ್ ಜಾರಕಿಹೊಳಿ ಅವರು ಡಿನ್ನರ್ ಸಭೆ ಮಾಡಿರುವ ಬಗ್ಗೆ ಕೇಳಿದಾಗ, “ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲ್ಕೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ” ಎಂದು ತಿಳಿಸಿದರು.

WATCH VIDEO: ದುಬೈ ಏರ್ ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನ: ಇಲ್ಲಿದೆ ಆಘಾತಕಾರಿ ವೀಡಿಯೋ

ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes

Share. Facebook Twitter LinkedIn WhatsApp Email

Related Posts

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

2 Mins Read

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

2 Mins Read

BIG NEWS : ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್ ಹೇಳಿಕೆ

2 Mins Read
Recent News

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

BREAKING : ಅಲ್ಕಾ ಲಾಂಬಾಗೆ ಬಿಗ್ ಶಾಕ್ : ಪ್ರತಿಭಟನೆ ವೇಳೆ ಹಲ್ಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್!

ಬೇಸಿಗೆಯ ಬಿಸಿಲಿಗೆ ಹೆಚ್ಚುತ್ತಿದೆಯೇ ಹೃದಯಾಘಾತ: ಇಲ್ಲಿದೆ ವೈಜ್ಞಾನಿಕ ಕಾರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳು

State News
KARNATAKA

BIG NEWS : ಪಡಿತರ ಅಕ್ಕಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ!

By ಸುರೇಶ್‌ KARNATAKA 2 Mins Read

ಬೆಂಗಳೂರು ಗ್ರಾಮಾಂತರ: ರಾಜ್ಯದ ಜನತೆಗೆ ಪಡಿತರ ವಿತರಣೆ ಮಾಡುವಲ್ಲಿ ಸರ್ಕಾರ ಬದ್ಧವಾಗಿದೆ. ರಾಗಿ ವಿತರಣೆ ಕೊಂಚ ತಡವಾಗಿದ್ದರೂ ಸಹ, ಆಯಾ…

ಇದು ಹನುಮಂತ ಮತ್ತು ಶನಿದೇವರ ಕತೆ; ತಪ್ಪದೇ ಓದಿ, ನಿಮಗೆ ಧೈರ್ಯ, ರಕ್ಷಣೆ ಮತ್ತು ಮನಶಾಂತಿ ಗ್ಯಾರಂಟಿ

BIG NEWS : ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್ ಹೇಳಿಕೆ

BREAKING : ನಾಳೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯರನ್ನ ಕರೆದದ್ದು ಯಾಕೆ ಗೊತ್ತಾ? : ಇಲ್ಲಿದೆ ಮಹತ್ವದ ಮಾಹಿತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.