ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ.
ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಹೊಸ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭವು ಡಿಸೆಂಬರ್ 5 ರಂದು ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಫಡ್ನವೀಸ್ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ನಿರ್ಗಮಿತ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು.
ರಾಜ್ಯದ ನೋಂದಾಯಿತ ಕಾರ್ಮಿಕರಿಗೆ ಮಹತ್ವದ ಮಾಹಿತಿ: ಹೀಗಿದೆ ಮಂಡಳಿಯಿಂದ ಸಿಗುವ ಸೌಲಭ್ಯಗಳು
Watch Video: ಫೆಂಗಲ್ ಚಂಡಮಾರುತ ಎಫೆಕ್ಟ್: ಲ್ಯಾಂಡ್ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ, ವಿಡಿಯೋ ವೈರಲ್