ಬೆಂಗಳೂರು: ಬಡತನ ರೇಖೆಗಿಂತಲೂ ಕೆಳ ವರ್ಗದವರಿಗಾಗಿ ರೂಪಿಸಲಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್​ಗಳಿಗೆ ಮಾರಾಟ ಮಾಡುವುದರ ವಿರುದ್ದ ಹೈಕೋರ್ಟ್‌ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ಅಕ್ಕಿ ಕಳ್ಳಸಾಗಣೆ ಮಾಡುವ ಡಾನ್​ಗಳನ್ನು ರಾಜಕಾರಣಿಗಳು ರಕ್ಷಿಸಲು ಮುಂದಾಗಿ ಅವರ ಬೆನ್ನಿಗೆ ನಿಲ್ಲುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅನ್ನಭಾಗ್ಯದಲ್ಲಿ ನನ್ನ ನಿಮ್ಮ ದುಡ್ಡು ಅಡಗಿರುತ್ತದೆ. ಸರ್ಕಾರ ಅದಕ್ಕೆ ಸಬ್ಸಿಡಿ ನೀಡುವ ಮೂಲಕ ಬಡವರ ಕಲ್ಯಾಣಕ್ಕೆಂದು ಯೋಜನೆ ಜಾರಿಗೊಳಿಸಿರುತ್ತದೆ. ಇದನ್ನು ಯಾರೂ ಮರೆಯಬಾರದು ಎಂದು ಪೀಠ ತಿಳಿಸಿತು.

Share.
Exit mobile version