ರಾಯಚೂರು: ರಾಜ್ಯದಲ್ಲೇ ಬಹುದೊಡ್ಡ ಖೋಟಾನೋಟು ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಯಚೂರಿನ ಪಶ್ಚಿಮ ಠಾಣೆಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಗರದಲ್ಲಿ ದಾಳಿಯನ್ನು ನಡೆಸಿ, ಖೋಟಾ ನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯನ್ನು ಪತ್ತೆ ಹಚ್ಚಿದ್ದಾರೆ. ಈ ದಾಳಿಯ ವೇಳೆಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾ ನೋಟು, ಅದಕ್ಕೆ ಬಳಸುತ್ತಿದ್ದಂತ ಪೂರಕ ವಸ್ತುಗಳಾದ ವೈಟ್ ಪೇಪರ್ ಜಪ್ತಿ ಮಾಡಿದ್ದಾರೆ.
ಈ ದಾಳಿಯಲ್ಲಿ ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ.
ಕೊಬ್ಬರಿ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲು
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!