ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ನಕಲಿ ಪೋಸ್ಟ್ ಹಾಕಿದ ಆರೋಪ ದಲ್ಲಿ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗಿಳಿಯಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸದ್ಯಕ್ಕೆ ಅವರನ್ನು ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಸಿದ್ದರಾಮಯ್ಯ ವಿರುದ್ಧ ನಕಲಿ ಪೋಸ್ಟ್ ಮಾಡಿದ್ದಾರೆಂದು ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗೆಳೆಯರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪಟ್ಟಣ ಸಂಬಂಧ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೇ?

ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗಿಳಿಯಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಕೆಟ್ಟದಾಗಿ ಬಿಂಬಿಸಿ ನಕಲಿ ಪೋಸ್ಟ್ ಹರಿ ಬಿಟ್ಟಿದ್ದರು.

ಸಿದ್ದರಾಮಯ್ಯ ಅವರ ಫೋಟೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಜತೆಗೆ, ಪೋಟೋವನ್ನು ಕೆಟ್ಟ ಮಾಹಿತಿಯೊಂದಿಗೆ ಬಳಕೆ ಮಾಡುವ ಮೂಲಕ ಸಿಎಂ ವರ್ಚಸ್ಸಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್‌ ನಾಗರಾಜು 2024ರ ಏ.9ರಂದು ಅರ್ಜಿದಾರರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಅರ್ಜಿದಾರರ ವಿರುದ್ಧ ಪಶ್ವಿಮ ವಿಭಾಗದ ಸಿಇಎನ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದೀಗ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲದೆ, ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತು.

Share.
Exit mobile version