ಬೆಂಗಳೂರು : ರಾಜ್ಯದಲ್ಲಿ ಟೊಮೆಟೊ ಮತ್ತು ಈರುಳ್ಳಿ ಬೆಲೆ ಕುಸಿತ ಕಂಡಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಈ ಬಾರಿಯ ಬಂಪರ್ ಫಸಲು ರಾಜ್ಯದಲ್ಲಿ ಬೆಲೆ ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
BIGG NEWS : 2023-24ನೇ ಸಾಲಿನಿಂದ ‘ಪಿಯುಸಿ’ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ
ಈ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ರೈತರ ಹಿತ ಕಾಪಾಡಲು ರಾಜ್ಯ ಸರ್ಕಾರ ಈರುಳ್ಳಿ, ಟೊಮೆಟೊ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಎಂದು ಕೋಲಾರ ಜಿಲ್ಲಾ ಹಣ್ಣು ತರಕಾರಿ ಬೆಳೆಗಾರರ ಹೋರಾಟ ಸಮಿತಿ ಆಗ್ರಹಿಸಿದೆ.
ನಗರದ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್ನ ಮೂಲಗಳ ಪ್ರಕಾರ, ಕೆಲವು ದಿನಗಳ ಹಿಂದೆ ಈರುಳ್ಳಿ ಬೆಲೆ ಕೆಜಿಗೆ 2 ರೂಪಾಯಿಯಿಂದ 10 ರೂಪಾಯಿಗೆ ಕುಸಿದಿತ್ತು. ಆದರೆ, ಈಗ ಉತ್ಪನ್ನದ ಗುಣಮಟ್ಟಕ್ಕೆ ಅನುಗುಣವಾಗಿ ಪ್ರತಿ ಕೆಜಿಗೆ 12 ರೂಪಾಯಿಯಿಂದ 18 ರೂಪಾಯಿವರೆಗೆ ಏರಿಕೆಯಾಗಿದೆ.
BIGG NEWS : 2023-24ನೇ ಸಾಲಿನಿಂದ ‘ಪಿಯುಸಿ’ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ