ಬೆಂಗಳೂರು: ರಾಜ್ಯಪಾಲರಿಗೆ ಸುಳ್ಳು ಆರೋಪ ಮಾಡಿ, ತೇಜೋವಧೆ ಮಾಡಿದಂತ ತೇಜಸ್ ಎ ಗೌಡ ಎಂಬುವರ ವಿರುದ್ಧ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ. ತೇಜಸ್ ಎ ಗೌಡ ಎಂಬ ವ್ಯಕ್ತಿ ಸುಳ್ಳು ಆರೋಪಗಳನ್ನು ಮಾಡಿ ನನ್ನ ತೇಜೋವದೆ ಮಾಡುವ ದುರುದ್ದೇಶದಿಂದ ಮುಕ್ತಾಯಗೊಂಡಿರುವ ಪ್ರಕರಣಗಳ ಉಲ್ಲೇಖ ಮಾಡಿ ಮತ್ತು ನ್ಯಾಯಾಲಗಳ ಆದೇಶಕ್ಕೆ ವಿರುದ್ಧವಾಗಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿರುತ್ತಾರೆ. ಇವರ ಪ್ರಯತ್ನದ ಹಿಂದೆ ಸುಳ್ಳು ದೂರುಗಳ ಮುಖಾಂತರ ಹಣ ಮಾಡುವ ದುರುದ್ದೇಶವೂ ಇರುವಂತಿದೆ. ಇಂತಹ ಸುಳ್ಳು ದೂರುಗಳ ಮೇಲೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ ಎಂದಿದ್ದಾರೆ.
ಇವರ ದುರುದ್ದೇಶಪೂರಿತ ಮತ್ತು ಸುಳ್ಳು ಸುದ್ದಿಯ ಆರೋಪಗಳ ಮೇಲೆ ನಾನು ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲೆಗಳ ಸಮೇತ ದೂರು ನೀಡಿದ್ದು, ಮುಂದಿನ ಕ್ರಮಕ್ಕಾಗಿ ಪೋಲಿಸರು ದೂರನ್ನು ದಾಖಲಿಸಿಕೊಂಡಿರುತ್ತಾರೆ. ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಸುಳ್ಳು ಆರೋಪಗಳನ್ನು ಮಾಡಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಪಲಾಯನ ಮಾಡಲು ಸಾಧ್ಯವಿರುವುದಿಲ್ಲ ಎಂದು ಹೇಳಿದ್ದಾರೆ.
ಕೆಲವರು ತೇಜೋವದೆಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪಗಳ ಮೇಲೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತಿದ್ದೇನೆ. ಕಾಂಗ್ರೆಸ್ ಪಕ್ಷದ ಪರವಾಗಿ ಕಾಲ್ತುಳಿತದ ಪ್ರಕರಣದಲ್ಲಿ ಹಿಂದಿನ ಘಟನೆಗಳಿಗೆ ನಾನು ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವಾಗದೆ, ಇಂತಹ ಅಪಪ್ರಚಾರಕ್ಕೆ ಕೆಲವರು ಮುಂದಾಗಿದ್ದು, ಹಿಟ್ ಅಂಡ್ ರನ್ ಮನೋಭಾವದವರಿಗೆ ಕಾನೂನಿನ ಮೂಲಕವೇ ಕ್ರಮ ಕೈಗೊಂಡು ಉತ್ತರ ನೀಡಲಾಗುವುದು. ಈಗಾಗಲೇ ಬೆಂಗಳೂರು ಮಹಾನಗರದ ಪೊಲೀಸ್ ಆಯುಕ್ತರಿಗೆ ಪ್ರದೇಶ ಕಾಂಗ್ರೆಸ್ ಪಕ್ಷದ ಪರವಾಗಿ ದೂರನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವ ಇಂತಹ ಅಪರಾಧಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೋರಲಾಗಿರುತ್ತದೆ ಎಂದು ತಿಳಿಸಿದ್ದಾರೆ.
11 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಯಂದ್ರೆ ಅದು IT, ED ದಾಳಿ: ಸಚಿವ ರಾಮಲಿಂಗಾರೆಡ್ಡಿ
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು