ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಎಡೆಮಾಡಿಕೊಟ್ಟಿದೆ.
ಕುಂದೂರಲ್ಲಿ ಚಂದ್ರಶೇಖರ್ ಮೃತದೇಹಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ನಂತರಹೊನ್ನಾಳಿ ನಿವಾಸದಲ್ಲಿ ಚಂದ್ರಶೇಖರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಂದೂರಲ್ಲಿ ಚಂದ್ರಶೇಖರ್ ಅಂತ್ಯಸಂಸ್ಕಾರಕ್ಕೆ ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ. ಹೊನ್ನಾಳಿ ನಿವಾಸದಲ್ಲಿ ಮಧ್ಯಾಹ್ನ 12ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ.
ಮಧ್ಯಾಹ್ನ 12 ಗಂಟೆಯ ನಂತರ ಮಠದ ವೃತ್ತದಿಂದ ಅಂತಿಮಯಾತ್ರೆ ಆರಂಭವಾಗಲಿದ್ದು, ಗೊಲ್ಲರಹಳ್ಳಿ ಮಾರ್ಗವಾಗಿ ಮಾಸಡಿ, ತರಗನಹಳ್ಳಿ, ಸಿಂಗಟಗೆರೆ, ಹನುಮನಹಳ್ಳಿ ಮಾರ್ಗವಾಗಿ ಹುಟ್ಟೂರು ಕುಂದೂರಿಗೆ ತಲುಪಲಿದೆ. ಮಧ್ಯಾಹ್ನ 3 ಗಂಟೆಗೆ ರೇಣುಕಾಚಾರ್ಯ ಅವರ ತಂದೆ, ತಾಯಿ ಸಮಾಧಿ ಪಕ್ಕದಲ್ಲೇ ವೀರಶೈವ ವಿಧಗಳ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ.