ಮಂಗಳೂರು: ಇಂದು ನಗರದ ಬೋಳಾರ ಸಿಟಿ ಬೀಚ್ ನಲ್ಲಿ ಖ್ಯಾತ ಡಿಜೆ ಸಜಂಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೇ ಡಿಜೆ ಕುಣಿತದಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನ ಮಾಡಿದ್ದರ ಕಾರಣ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದರು. ಈ ಹಿನ್ನಲೆಯಲ್ಲಿ ಇಂದು ಸಂಜೆ ನಡೆಯಬೇಕಿದ್ದಂತ ಖ್ಯಾತ ಡಿಜೆ ಸಜಂಕಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಹೊಸ ವರ್ಷಾಚರಣೆಗೆ ಮುನ್ನವೇ ಮಂಗಳೂರಿನ ಬೋಳಾರ ಸಿಟಿ ಬೀಚ್ ನಲ್ಲಿ ಖ್ಯಾತ ಡಿಜೆ ಸಜಂಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೇ ಸಜಂಕಾ ಡಿಜೆ ಕುಣಿತದಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನ ಮಾಡಿದ್ದಾರೆ. ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಹಿಂದೂಪರ ಸಂಘಟನೆಗಳು ತೀವ್ರ ಒತ್ತಾಯ, ಆಕ್ರೋಶವನ್ನು ಹೊರ ಹಾಕಿದ್ದರು. ಹೀಗಾಗಿ ಮಂಗಳೂರು ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದರು.
ಈ ಬಗ್ಗೆ ಸ್ವತಹ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪ್ ಅಗರ್ವಾಲ್ ಮಾಹಿತಿ ನೀಡಿದ್ದು, ಇಂದು ಬೋಳಾರದ ಸಿಟಿ ಬೀಚ್ ನಲ್ಲಿ ಆಯೋಜಿಸಿದ್ದಂತ ಸಜಂಕಾ ಅವರ ಡಿಜೆ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವುದಿಲ್ಲ. ಹೀಗಾಗಿ ಕಾರ್ಯಕ್ರಮ ರದ್ದುಗೊಳಿಸುವುದಾಗಿ ಆಯೋಜಕರು ತಿಳಿಸಿದ್ದಾಗಿ ಹೇಳಿದ್ದಾರೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಕನ್ಯಾಕುಮಾರಿ ನಡುವೆ ವಿಶೇಷ ರೈಲುಗಳು ಸಂಚಾರ