ಖಾನಾಪುರ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ರೈತ ಹೋರಾಟಗಾರ್ತಿ ಎಂದೇ ಗುರ್ತಿಸಿಕೊಂಡಿದ್ದ ಜಯಶ್ರೀ ಗುರನ್ನವರ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಮೂಲಕ ರೈತ ಹೋರಾಟಗಾರ್ತಿ ‘ಜಯಶ್ರೀ ಗುರನ್ನವರ’ ಇನ್ನಿಲ್ಲವಾಗಿದ್ದಾರೆ.
ಖಾನಾಪುರ ತಾಲೂಕಿನ ತೋಲಗಿ ಗ್ರಾಮದ ರೈತ ಹೋರಾಟಗಾರ್ತಿ, ರೈತರ, ದೀನ ದಲಿತರ ಹಾಗೂ ಬಡವರ ಪರವಾಗಿ ನಿರಂತರ ಹೋರಾಟ ಮಾಡಿರುವ ಜಯಶ್ರೀ ಗುರನ್ನವರ ಅವರು, ಅನಾರೋಗ್ಯಕ್ಕೆ ತುತ್ತಾಗಿದ್ದರು.
ಬೆಳಗಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಹೀಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಅಂದಹಾಗೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಆಪ್ತ ಸಹಾಯಕನ ಮುಖಾಂತರ ರೈತ ಹೋರಾಯಗಾರ್ತಿ ಜಯಶ್ರೀ ಗುರನ್ನವರ್ ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು.
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ