ತುಮಕೂರು : ಕರಡಿ ದಾಳಿಗೆ ರೈತ ಬಲಿಯಾದ ಘಟನೆ ತುಮಕೂರು ಜಲ್ಲೆಯ ಕುಣಿಗಲ್ ತಾಲೂಕಿನ ಎಲೆಕಡಲು ಗ್ರಾಮದ ಬಳಿ ನಡೆದಿದೆ.
ರೈತ ರಾಜು ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕರಡಿ ಅಟ್ಯಾಕ್ ಮಾಡಿದೆ. ಪರಿಣಾಮ ದಾಳಿಯಿಂದ ಗಂಭೀರ ಗಾಯಗೊಂಡ ರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕರಡಿ ದಾಳಿ ಹಿನ್ನೆಲೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.