ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಕನಕಪುರದ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಇಂದು ಮುಂಜಾನೆ 4 ಗಂಟೆಗೆ ಜಮೀನಿನಲ್ಲಿ ಹಾಕಿದ್ದಂತ ಮೆದೆ ನೋಡಲು ತೆರಳುತ್ತಿದ್ದಂತ ವೇಳೆಯಲ್ಲಿ ರೈತ ಕರಿಯಪ್ಪ(65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದೆ.
ಕಾಡಾನೆ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಕರಿಯಪ್ಪ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಂತ ಸಂದರ್ಭದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ಶಿವಮೊಗ್ಗದಲ್ಲಿ ಭೀಕರ ಅಪಘಾತ: ಪ್ರವಾಸಿಗರ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ