ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ಕಬ್ಬು ಬೆಳೆಗಾರರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು ತಡೆಯಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ರಸ್ತೆ ತಡೆ ಚಳವಳಿಯನ್ನು ನಡೆಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರು, ಪ್ರಯಾಣಿಕರು ರಸ್ತೆ ತಡೆ ಚಳವಳಿ ಸಮಯದಲ್ಲಿ ಸಹಕಾರ ನೀಡಬೇಕು” ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ. ರೈತರ ಹಿತದೃಷ್ಟಿಯಿಂದ ಜನರು ಹೋರಾಟಕ್ಕೆ ಬೆಂಬಲ ನೀಡಬೇಕು” ಎಂದು ಕುರುಬೂರು ಶಾಂತಕುಮಾರ್ ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ.
ಬೆಕ್ಕಿಗೆ ಚೆಲ್ಲಾಟ, ಇಲಿಗೆ ಪ್ರಾಣ ಸಂಕಟ ಎಂಬಂತೆ ರಾಜ್ಯದ ಕಬ್ಬು ಬೆಳೆಗಾರರ ಪರಿಸ್ಥಿತಿಯಾಗಿದೆ. 30 ಲಕ್ಷ ಕಬ್ಬು ಬೆಳೆಗಾರರ ಪರವಾಗಿ ರಾಜ್ಯದ ಉದ್ದಗಲಕ್ಕೆ ಪ್ರತಿಭಟನೆ ನಡೆಯುತ್ತಿದೆ. ಕಬ್ಬಿನ ಬೆಲೆ ಏರಿಕೆ ಕುರಿತು ಸರ್ಕಾರ 4 ಸಭೆಗಳನ್ನು ಮಾಡಿದೆ” ಎಂದರು. ಸರ್ಕಾರಕ್ಕೆ ಚಳವಳಿಗಳ ಮೂಲಕ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದಿದ್ದಾರೆ. ಸರ್ಕಾರ ಈ ಪ್ರತಿಭಟನೆ ಜಗ್ಗದೇ ಹೋದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯ ಕಬ್ಬು ಬೆಳೆಗಾರರದ್ದಾಗಿದೆ. ರಾಜ್ಯದ ಮೂವತ್ತು ಲಕ್ಷ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಯುತ್ತಿದೆ. ಸರ್ಕಾರ ಇಲ್ಲಿಯವರೆಗೆ ಯಾವುದೇ ತೀರ್ಮಾನ ಕೈಗೊಳ್ಳದೆ ವಿಳಂಬ ನೀತಿ ಅನುಸರಿಸುತ್ತಿದೆ. ಹೀಗಾಗಿ ಕಬ್ಬಿನ ಬೆಲೆ ಏರಿಕೆ ಮಾಡಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಬೀದರ್ ಜನತೆಗೆ ಸಿಹಿಸುದ್ದಿ: ತಿರುಪತಿಗೆ ವಿಶೇಷ ರೈಲು ಸಂಚಾರ, ಇಲ್ಲಿದೆ ವೇಳಾಪಟ್ಟಿ
BIG NEWS : ʻಗುಜರಾತ್ʼ ಅನ್ನು 100 % ‘ಹರ್ ಘರ್ ಜಲ್’ ರಾಜ್ಯ ಎಂದು ಘೋಷಣೆ | Har Ghar Jal