ಬೆಂಗಳೂರು : ರೈತರ ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು. ನಿಮಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ, ರಾಜೀನಾಮೆ ನೀಡಬೇಕು – ಸಿದ್ಧರಾಮಯ್ಯ
ಪ್ರಾದೇಶಿಕ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ರಚಿಸಲಾದ ವೇದಿಕೆ ‘ಫರ್ಸ್ಟ್ ಸರ್ಕಲ್’ ವತಿಯಿಂದ ನವೆಂಬರ್ 25ರಿಂದ ಮೂರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಬಿಸಿನೆಸ್ ನೆಟ್ ವರ್ಕಿಂಗ್ ಎಕ್ಸ್ ಪೋ ಹಾಗೂ ವಾರ್ಷಿಕ ಸಮಾವೇಶ ಆಯೋಜಿಸಲಾಗಿದೆ. ಈ ಸಮಾರಂಭ ಉದ್ಘಾಟಿಸಿ ಸಚಿವರು ಮಾತನಾಡಿದರು.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ, ರಾಜೀನಾಮೆ ನೀಡಬೇಕು – ಸಿದ್ಧರಾಮಯ್ಯ
ಈ ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು ಉದ್ಯಮಶೀಲತೆಯ ಸ್ಫೂರ್ತಿ ಹೊಂದಿದವರಾಗಿದ್ದಾರೆ. ನೀವೆಲ್ಲರು ಒಕ್ಕಲುತನ (ಕೃಷಿ) ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು. ಕರ್ನಾಟಕದ ಬೆಂಗಳೂರು ಇಡೀ ವಿಶ್ವಕ್ಕೆ ಆವಿಷ್ಕಾರದ ನಾಡಾಗಿ ಗುರುತಿಸಿಕೊಂಡಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಪುಣ್ಯಭೂಮಿ, ಭರವಸೆಯ ನಾಡಿನಲ್ಲಿ ನಾವಿದ್ದೇವೆ. ಇಲ್ಲಿನ ಅವಕಾಶಗಳನ್ನು ನಿವೆಲ್ಲರು ಅರಿಯಬೇಕು ಎಂದು ತಿಳಿಸಿದರು.
ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಕಿಂಗ್ ಪಿನ್ ಬೊಮ್ಮಾಯಿ, ರಾಜೀನಾಮೆ ನೀಡಬೇಕು – ಸಿದ್ಧರಾಮಯ್ಯ