ಬೆಂಗಳೂರು : ರಾಜ್ಯ ಸರ್ಕಾರವು ದನ, ಎಮ್ಮೆ ಮತ್ತು ಕರುಗಳಿಗೆ ಕಾಲುಬಾಯಿ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾಲುಬಾಯಿ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 1 ರಿಂದ ಏಪ್ರಿಲ್ 30ರವರೆಗೆ ಹಮ್ಮಿಕೊಳ್ಳಲಾಗಿದೆ. ಲಸಿಕಾದಾರರು ನಿಮ್ಮ ಗ್ರಾಮಕ್ಕೆ ನಿಮ್ಮ ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ.
ತಪ್ಪದೇ ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಿ, ಆರ್ಥಿಕ ನಷ್ಟ ತಡೆಯುವಂತೆ ಸೂಚನೆ ನೀಡಲಾಗಿದೆ.