ಹಾವೇರಿ : ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ 2022-23ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಫ್ಲೇಸ್ಟೋರ್ನಿಂದ “ಪೂರ್ವ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ ಮಾಡಬಹುದಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.
BIGG NEWS : ಮಣಿಪುರದ ಸೇನಾ ಶಿಬಿರದ ಬಳಿ ಭೂಕುಸಿತ : ಸಾವಿನ ಸಂಖ್ಯೆ 20 ಕ್ಕೆ ಏರಿಕೆ, 40 ಕ್ಕೂ ಹೆಚ್ಚು ಜನರು ಕಾಣೆ
ಈ ಮಾಹಿತಿಯನ್ನು ಬೆಳೆವಿಮೆ, ಬೆಳೆನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಆರ್ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 46 ಡಿವೈಎಸ್ಪಿ ವರ್ಗಾವಣೆಗೊಳಿಸಿ ಆದೇಶ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯಗದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಕೋರಲಾಗಿದೆ.