ಚಿಕ್ಕಬಳ್ಳಾಪುರ : ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರು ಎಷ್ಟೇ ಸಾಲ ಮಾಡಿದ್ದರು ಕೂಡ ಅವರ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ತಿಳಿಸಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ರಕ್ಷಾ ರಾಮಯ್ಯ ಪರವಾಗಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ನಿಮ್ಮ ಬಾಯಿಗೆ ಸಕ್ಕರೆ ಹಾಕುತ್ತೇನೆ 40,000 ಮತಗಳ ಲೀಡ್ ಕೊಡಿ ಮತದಾರರ ಬಾಯಿಗೆ ಸಕ್ಕರೆ ಹಾಕುತ್ತೇನೆ ಶಾಸಕ ಸುಬ್ಬ ರೆಡ್ಡಿಗೆ ಶಕ್ತಿ ಬರಬೇಕು ಅಂದರೆ ಕಾಂಗ್ರೆಸ್ ಗೆ ಮತ ಹಾಕಿ ಎಂದು ಸಿಎಂ ಸಿದ್ದರಾಮಯ್ಯ ಭಾಷಣದಲ್ಲಿ ತಿಳಿಸಿದರು.
ಜಾತಿಗಣತಿಯಲ್ಲಿ ಏನಿದೆ ಎಂದು ನಾನು ಇನ್ನೂ ನೋಡಿಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಆಯೋಗ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿಯನ್ನು ಸಲ್ಲಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾತಿಗಣತಿ ಮಾಡಿದೆ ಸಂವಿಧಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುತ್ತದೆ ರೈತರು ಎಷ್ಟೇ ಸಾಲ ಮಾಡಿದರೂ ಕೂಡ ಮನ್ನಾ ಮಾಡುತ್ತೇವೆ ಭಾರತೀಯ ಜನತಾ ಪಕ್ಷ ಅಂಬಾನಿ ಗೌತಮ್ ಅದಾನಿ ಪರವಾಗಿದೆ ಕಾಂಗ್ರೆಸ್ ಪಕ್ಷ ಮಾತ್ರ ದೇಶದ ಬಡವರು ರೈತರ ಪರವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.