ಧಾರವಾಡ ; 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್‍ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ನಾಳೆ BBMPಯಿಂದ ‘12,692 ಪೌರಕಾರ್ಮಿಕರ ಹುದ್ದೆ’ಗಳ ಕರಡು ಆಯ್ಕೆ ಪಟ್ಟಿ ಪ್ರಕಟ | BBMP Recruitment 2024