ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನಲ್ಲಿ ರೈತರ ಮಕ್ಕಳಿಗಾಗಿ ನಡೆಸುವ 10 ತಿಂಗಳ ತರಬೇತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶಿವಮೊಗ್ಗ ಕಛೇರಿಯಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಏ.01 ರೊಳಗಾಗಿ ಆಯಾ ಸಂಬಂಧ ಪಟ್ಟ ಕಛೇರಿಗಳಿಗೆ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತರಬೇತಿಗೆ ಅರ್ಹತೆಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತಿರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಹೆಚ್ಚಿನ ವಿವರಗಳಿಗೆ ದೂ. ಸಂ.: 08182-222794/6986950460 ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಶಿವಮೊಗ್ಗ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಶಂಕಿತ ಆರೋಪಿ BMTC ಬಸ್ಸಿನಲ್ಲಿ ಪ್ರಯಾಣ, ಎಲ್ಲಿಂದ ಎಲ್ಲಿಗೆ ಗೊತ್ತಾ?