ಬೆಂಗಳೂರು : ನಕಲಿ ದಾಖಲೆ ಮೋಸದ ವ್ಯವಹಾರಗಳಿಂದ ನಿಮ್ಮ ಆಸ್ತಿ ರಕ್ಷಣೆಗಾಗಿ ಕೂಡಲೇ ಜಮೀನಿನ ದಾಖಲೆಯ ಜೊತೆ ಆಧಾರ್ ಲಿಂಕ್ ಮಾಡುವಂತೆ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.
ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವುದನ್ನು ತಡೆಯಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ” ಎಂದು ತಿಳಿಸಿದ್ದಾರೆ.
ರಾಜ್ಯದಾದ್ಯಂತ 4 ಕೋಟಿಗೂ ಅಧಿಕ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.75 ಕೋಟಿ ಆರ್‌ಟಿಸಿಗಳನ್ನು ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಲ್ಲದೆ, 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಕಲಬುರಗಿ ವಿಭಾಗದಲ್ಲಿ 45 ಲಕ್ಷ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 18 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 40 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಮುಂದಿನ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ತಾಕೀತು ಮಾಡಿದರು.
ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ ಜಮೀನನ್ನು ಮತ್ಯಾರೋ ಮಾರಾಟ ಮಾಡುವಂತಹ ವಂಚನೆಗಳನ್ನು ತಡೆಯಬಹುದು. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್ ಜೋಡಣೆ ಮಾಡಬೇಕು. ಆಧಾರ್ ಜೋಡಣೆಯಿಂದ ಜನರಿಗೆ ಆಗುವ ಅನುಕೂಲ ಏನು ಎಂಬ ಕುರಿತು ಕ್ಯಾಂಪೇನ್ ಮಾಡಿ, ಇದರಿಂದ ಒಳ್ಳೆಯ ಸರಳ ಆಡಳಿತ ನೀಡಬಹುದು, ಅಧಿಕಾರಿಗಳ ಕೆಲಸದ ಒತ್ತಡವೂ ಕಡಿಮೆಯಾಗುತ್ತದೆ ಎಂದು