ಬೆಳಗಾವಿ : ಪ್ರತಿ ಟನ್ ಕಬ್ಬಿಗೆ 3500 ನಿಗದಿ ನೀಡುವಂತೆ ರೈತರು ಭಾರಿ ಪ್ರತಿಭಟನೆ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಕರೆದಿದ್ದ ಸಭೆಯನ್ನು ಕಬ್ಬು ಬೆಳೆಗಾರರು ಇದೀಗ ಬಹಿಷ್ಕಾರ ಮಾಡಿದ್ದಾರೆ. ಪ್ರತಿಭಟನೆ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ನಲ್ಲಿ ಪ್ರತಿಭಟನೆ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ಅಹ್ವಾನ ತಿರಸ್ಕರಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಹೌದು ಪ್ರತಿ ಟನ್ ಕಬ್ಬಿಗೆ 3500 ನಿಗದಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ರೈತರು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಹಿಂದೂ ಸಿಎಂ ಸಿದ್ದರಾಮಯ್ಯ ಹೈ ವೋಲ್ಟೇಜ್ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಒಂದು ಸಭೆ ನಡೆಯಲಿದೆ. ಸಭೆಗೆ ಬರುವಂತೆ 82 ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚನೆ ನೀಡಲಾಗಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಕಬ್ಬು ಬೆಳೆಗಾರರ ಜೊತೆಗೆ ಸಿಎಂ ಸಭೆ ನಡೆಸಲಿದ್ದು ಒಟ್ಟು 46 ರೈತ ಮುಖಂಡರಿಗೆ ಆಹ್ವಾನ ನೀಡಲಾಗಿದ್ದು ಇನ್ನು ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ.ಸಭೆಯಲ್ಲಿ ಬೆಳಗಾವಿ, ಬಾಗಲಕೋಟೆ, ಹಾವೇರಿ, ವಿಜಯಪುರ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಭಾಗವಹಿಸಲು ಸೂಚಿಸಲಾಗಿದೆ. ಆದರೆ ಸಭೆಗೆ ಹೋಗದಿರಲು ರೈತ ಮುಖಂಡರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಆಹ್ವಾನವನ್ನು ರೈತ ಮುಖಂಡರು ತಿರಸ್ಕರಿಸಿದ್ದಾರೆ ಕಾರ್ಖಾನೆ ಮಾಲೀಕರ ಜೊತೆಗೆ ಸಭೆ ಮಾಡಿ ನಿರ್ಧರಿಸುವಂತೆ ಪಟ್ಟು ಹಿಡಿದಿದ್ದಾರೆ.








