ಬೆಂಗಳೂರು : ಇಂದಿನಿಂದ ಮಳೆಗಾಲ ಅಧೀವೇಶನ ಶುರುವಾಗಿದೆ. ಇದಕ್ಕೂ ಮುನ್ನ ಪ್ರತಿಭಟನೆಯ ಬಿಸಿ ತಟ್ಟಲಿದೆ. ನಗರದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
BREAKING NEWS: ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್ ಮಾಡ್ತಿರೋ BBMP ಅಧಿಕಾರಿಗಳು
ಈ ವೇಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತ ಸಂಘಟನೆಗಳು ನಿರ್ಧಾರಿಸಿದ್ದಾರೆ. ರೈತ ವಿರೋಧಿ ಮತ್ತು ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಈಗಾಗಲೇ ಮಳೆಯಿಂದ ಅಪಾರ ನಷ್ಟದ ಬೆಳೆ ಹಾನಿಯಾಗಿದೆ.ಹೀಗಾಗಿ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರೈತರು ಹೋರಾಟ ಮಾಡುತ್ತಿದ್ದಾರೆ.
ಇತ್ತ ಮಳೆಗಾಲ ಅಧಿವೇಶನ ಆರಂಭವಾಗಿದ್ದು, ಅಗಲಿದೆ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಕಲಾಪದಲ್ಲಿ ಮಳೆಯಿಂದ ಹಾನಿಯಾದ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.