ಬೆಂಗಳೂರು : ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ರೈತರು ವಿಮಾ ಯೋಜನೆಯು ಉಪಯೋಗವಾಗಲಿದೆ. ನೋಂದಣಿಗೆ ಒಳಪಡುವ ಬೆಳೆಗಳು ಹಾಗೂ ನೋಂದಣಿಗೆ ಕೊನೆಯ ದಿನ: ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳಿಗಳಿಗೆ ಜುಲೈ 31 ಕೊನೆಯ ದಿನವಾಗಿದೆ.
ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ, ತೊಗರಿ, ಭತ್ತ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ. ಬೆಳೆ ವಿಮೆ ನೋಂದಣಿಗಾಗಿ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಅಥವಾ ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಸಂಪರ್ಕಿಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿ (ಮೊ.8277472721) ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.