ಬೆಂಗಳೂರು : ಬೆಳೆ ಪರಿಹಾರದ ಹಣ ಖಾತೆಗೆ ಜಮಾ ಆಗದ ರೈತರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್‍ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್‍ಡೇಟ್‍ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್‍ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು.
ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಐ.ಎಫ್.ಎಸ್.ಸಿ ಕೋಡ್ ಅಪ್ಡೇಟ್ ಮಾಡಿಸಿ ಎನ್.ಪಿ.ಸಿ.ಐ ಮಾಡಿಸಬೇಕು.
ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶಿಲ್ದಾರ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.