ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದವರಿಗೆ ಸಿಹಿಸುದ್ದಿ ನೀಡಿದ್ದು, 2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ. ನವೆಂಬರ್ 23 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಸ್ಕ್ಯಾನ್ ಮಾಡಬಹುದಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವಂತವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ.
ಗಂಗಾ ಕಲ್ಯಾಣ ಯೋಜನೆಗೆ 5 ಎಕರೆ ಒಳಗಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆಗೆ ಘಟಕ ವೆಚ್ಚವಾಗಿ ರೂ.4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50,000 ಸಾಲವೂ ಸೇರಿರುತ್ತದೆ ಎಂದು ತಿಳಿಸಿದೆ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಅಕ್ಟೋಬರ್ 23ರಿಂದ ಸಲ್ಲಿಸಲು ಆರಂಭಿಸಲಾಗುತ್ತದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದೆ.