ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ಇರುವುದರಿಂದ ಕಾಂಗ್ರೆಸ್ನ ಎಲ್ಲ ಶಾಸಕರನ್ನು ಸೋಮವಾರ ಮಧ್ಯಾಹ್ನ ಹೋಟೆಲ್ಗೆ ಕರೆದೊಯ್ಯಲಾಗುತ್ತಿದೆ. ಆಡಳಿತ ಪಕ್ಷದ ಶಾಸಕರು ಹೋಟೆಲ್ ನಿಂದಲೇ ಮಂಗಳವಾರ ಬೆಳಿಗ್ಗೆ ಮತದಾನಕ್ಕೆ ಬರಲಿದ್ದಾರೆ.
Water Supply: ಬೆಂಗಳೂರಿಗರೇ ಗಮನಿಸಿ, ನಾಳೆ ಈ ಭಾಗಗಳಲ್ಲಿ ‘ನೀರು ಪೂರೈಕೆಯಲ್ಲಿ’ ವ್ಯತ್ಯಯ
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್ನ ಮೂವರು ಮತ್ತು ಎನ್ಡಿಎ ಮೈತ್ರಿಕೂಟದ ಇಬ್ಬರು ಕಣದಲ್ಲಿದ್ದಾರೆ. ಮೂರು ಸ್ಥಾನ ಗೆಲ್ಲುವ ಅವಕಾಶ ಕಾಂಗ್ರೆಸ್ಗೆ ಇದ್ದರೂ ಎನ್ಡಿಎ ಮೈತ್ರಿಕೂಟವು ಮತಗಳ ಕೊರತೆಯ ಮಧ್ಯೆಯೂ ಡಿ.ಕುಪೇಂದ್ರ ರೆಡ್ಡಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಇದರಿಂದಾಗಿ ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಬೇಕಾಗಿದೆ.
LIFE STYLE: ಊಟದ ನಂತರ ಬೆಲ್ಲವನ್ನು ತಿನ್ನುವುದರಿಂದ ಆಗುವ ಪ್ರಯೋಜನಗಳು ಹೀಗಿದೆ!
ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿರುವುದರಿಂದ ವಿಧಾನಮಂಡಲದಲ್ಲಿ ಸೋಮವಾರ ಸಂತಾಪ ಸೂಚನೆ ನಡೆಯಲಿದೆ. ಕಾಂಗ್ರೆಸ್ನ ಎಲ್ಲ ಸದಸ್ಯರು, ಸಂತಾಪ ಸೂಚನೆಯಲ್ಲಿ ಭಾಗವಹಿಸಿದ ಬಳಿಕ ವಿಧಾನಸೌಧದಿಂದ ನೇರವಾಗಿ ಹೋಟೆಲ್ಗೆ ತೆರಳಲಿದ್ದಾರೆ. ಕೋರಮಂಗಲದ ಎಂಬೆಸಿ ಗಾಲ್ಫ್ ಲಿಂಕ್ಸ್ ಬ್ಯುಸಿನೆಸ್ ಪಾರ್ಕ್ನಲ್ಲಿರುವ ಹಿಲ್ಟನ್ ಹೋಟೆಲ್ನಲ್ಲಿ ಕಾಂಗ್ರೆಸ್ನ ಎಲ್ಲ ಶಾಸಕರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಾಸಕರನ್ನು ಹೋಟೆಲ್ಗೆ ಕರೆತರುವ ಜವಾಬ್ದಾರಿಯನ್ನು ಬೈರತಿ ಸುರೇಶ್, ಕೃಷ್ಣ ಬೈರೇಗೌಡ ಸೇರಿದಂತೆ ಕೆಲವು ಸಚಿವರಿಗೆ ವಹಿಸಲಾಗಿದೆ. ಆಯಾ ಜಿಲ್ಲೆಯ ಕಾಂಗ್ರೆಸ್ ಶಾಸಕರು ಸೋಮವಾರ ಬೆಳಿಗ್ಗೆ ಕಡ್ಡಾಯವಾಗಿ ವಿಧಾನಸಭೆ ಕಲಾಪಕ್ಕೆ ಹಾಜರಾಗಿ, ಹೋಟೆಲ್ ತಲುಪುವಂತೆ ನಿಗಾ ಇರಿಸುವ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ, ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ ಮತ್ತು ಕೆ.ಎಚ್. ಪುಟ್ಟಸ್ವಾಮಿಗೌಡ ಅವರನ್ನೂ ಹಿಲ್ಟನ್ ಹೋಟೆಲ್ಗೆ ಕರೆದೊಯ್ಯುವ ಕಸರತ್ತಿನಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.