ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ರೋಟರಿ ಸಂಸ್ಥೆ ಶಿವಮೊಗ್ಗ ಪೂರ್ವ ಹಾಗೂ ಎಲ್ಲಾ ಸರ್ಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ದಿ: 27/02/2022 ರಿಂದ ಜಿಲ್ಲೆಯಾದ್ಯಂತ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ತುಂಗಾನಗರದ ನಗರ ಪ್ರಸೂತಿ ಕೇಂದ್ರದಲ್ಲಿ ಫೆ.27 ರಂದು ಬೆಳಗ್ಗೆ 8.00ಕ್ಕೆ ಪಲ್ಸ್ ಪೋಲಿಯೋ ಲಸಿಕೆಯ ಚಾಲನಾ ಕಾರ್ಯಕ್ರಮ-2022ನ್ನು ಆಯೋಜಿಸಿದೆ.
ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ‘ಟೆಂಪೋ ಟ್ರಾವೆಲ್’ ಪಲ್ಟಿ: 30ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಫೆ. 27 ರಿಂದ ಮಾ.02 ರವರೆಗೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ ತಾಲೂಕುಗಳು ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಹಾಕಲಾಗುವುದು.
ಶಿವಮೊಗ್ಗ ನಗರದಲ್ಲಿ ಸೆಕ್ಷನ್-144 ಜಾರಿಯಲ್ಲಿರುವುದರಿಂದ ಫೆ. 27ರ ಭಾನುವಾರದಂದ ನಗರದಲ್ಲಿರುವ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುವುದು. ಪುನಃ ಮಾ.06 ರಿಂದ ನಗರದಲ್ಲಿರುವ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ನೀಡಿ ಮಾ. 07 ರಿಂದ 09 ರವರೆಗೆ ಮನೆಮನೆ ಭೇಟಿ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗುವುದು.
BIGG BREAKING NEWS: ‘BBMP ಕಚೇರಿ’ಗಳ ಮೇಲೆ ‘ಎಸಿಬಿ ದಾಳಿ’ | ACB Raid
ಈ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿರುತ್ತಾರೆ.