ರಾಜಸ್ಥಾನ: ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತನ್ನ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ.
ರಾಜಸ್ಥಾನದ ಜೋಧ್ ಪುರದಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗಳು ಯಶಸ್ವಿಯೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದದಾರೆ.
ಆತ್ಮಹತ್ಯೆಗೂ ಮುನ್ನ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಬರೆದಿರುವಂತ ಡೆತ್ ನೋಟ್ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಉಲ್ಲೇಖಿಸಿದ್ದಾರೆ.
ಕಳೆದ ಶುಕ್ರವಾರದಂದು ಶಾಲೆಯಿಂದ ಮನೆಗೆ ಬಂದಿದ್ದಂತ ಶಿಕ್ಷಕಿ ಸಂಜು, ತಾನು, ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
BREAKING: ಕರ್ನಾಟಕ ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನಕ್ಕೆ ಹೆಸರು ಅಂತಿಮ
ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್